ಅಭಿಪ್ರಾಯ / ಸಲಹೆಗಳು

ವೈಜ್ಞಾನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ

ಬಂಡೂರು ಕುರಿ ಸಂವರ್ಧನಾ ಕೇಂದ್ರ, ಧನಗೂರು ಮಳವಳ್ಳಿ ತಾಲ್ಲೂಕು, ಮಂಡ್ಯ ಜಿಲ್ಲೆ-ಇಲ್ಲಿ ಕುರಿ-ಮೇಕೆ ಪಾಲಕರಿಗೆ ಮೂರು ದಿನಗಳ ವಸತಿ ಸಹಿತ ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ವೈಜ್ಞಾನಿಕ ತರಬೇತಿ ನೀಡಲಾಗುವುದು. ಅಲ್ಲದೆ ಸಹಕಾರ ಸಂಘಗಳ ಸ್ಥಾಪನೆ ಮತ್ತು ಅದರ ಮೂಲಕ ಕುರಿ ಮೇಕೆ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಸಹಕಾರ ಸಂಘಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು. ಸಹಕಾರ ಸಂಘಗಳ ಸದಸ್ಯರಿಗೆ ತರಬೇತಿಯಲ್ಲಿ ಆದ್ಯತೆ ಇರುತ್ತದೆ.

ಕುರಿ ಮೇಕೆ ಪಾಲನೆಗೆ ಮೊದಲ ಸವಾಲಾಗಿ ಮೇವಿನ ಕೊರತೆ ಎದುರಾಗಿದೆ. ಇದನ್ನು ದೀರ್ಘಕಾಲೀನ ಮತ್ತು ಅಲ್ಪಕಾಲೀನ ಕಾರ್ಯಕ್ರಮಗಳ ಮೂಲಕ ಪರಿಹರಿಸಲಾಗುತ್ತಿದೆ. ಮೇವಿನ ಸಂಶೋಧನೆ ಮತ್ತು ವಿಸ್ತರಣೆಗೆ ಆದ್ಯತೆ ಕೊಟ್ಟು ನಿಗಮದ ಸಂವರ್ಧನಾ ಕೇಂದ್ರಗಳನ್ನು ರೂಪಿಸಲಾಗುತ್ತಿದೆ. ಮರ, ಮೇವುಗಳನ್ನು ಬೆಳೆಸಲು ಅರಣ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆಗಳ ನಡುವೆ ಸಂಯೋಜಕನಂತೆ ನಿಗಮ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ ಗೋಮಾಳ ಮುಂತಾದ ಸಾರ್ವಜನಿಕ ಸರ್ಕಾರಿ ಭೂಮಿಗಳಲ್ಲಿ ಮೇವಿನ ಉತ್ಪಾದನೆಗೆ ಸಹಕಾರಿ ಸಂಘಗಳ ಮೂಲಕ ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಕುರಿ ಮತ್ತು ಉಣ್ಣೆ ಅಭಿವೃದ್ಧಿ ಯೋಜನೆ ರಾಣೆಬೆನ್ನೂರು ಕೇಂದ್ರದಲ್ಲಿ 25 ಅಭ್ಯರ್ಥಿಗಳಿಗೆ ಪ್ರತಿವರ್ಷ ಆರು ತಿಂಗಳುಗಳ ಉಣ್ಣೆ ಸಂಗ್ರಹಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಬಗ್ಗೆ ತರಬೇತಿ ಕಾರ್ಯಕ್ರಮವಿರುತ್ತದೆ. ಅಲ್ಲದೆ ರಾಜ್ಯಾದ್ಯಾಂತ ತಾಲ್ಲೂಕು ಮಟ್ಟದಲ್ಲಿ ಕುರಿ/ಮೇಕೆ ಸಾಕಾಣಿಕೆ, ಸಹಕಾರ ಸಂಘಗಳ ಸ್ಥಾಪನೆ ಮತ್ತು ಕಾರ್ಯಚಟುವಟಿಕೆಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.

 

ಇತ್ತೀಚಿನ ನವೀಕರಣ​ : 23-01-2022 03:36 AM ಅನುಮೋದಕರು: Managing Director



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080